ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಇಬ್ಬರು ಆಟಗಾರರು 2027 ರ ಏಕದಿನ ವಿಶ್ವಕಪ್ವರೆಗೆ ಟೀಮ್ ಇಂಡಿಯಾದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಇದರ ನಡುವೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬೀಳ್ಕೊಡಲು ಕ್ರಿಕೆಟ್ ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ.
ಟಿ20 ಹಾಗೂ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಈ ವರ್ಷಾಂತ್ಯದಲ್ಲಿ ಏಕದಿನ ಕ್ರಿಕೆಟ್ಗೂ ವಿದಾಯ ಹೇಳುವ ಸಾಧ್ಯತೆಯಿದೆ. ಇದನ್ನು ಪುಷ್ಠೀಕರಿಸುವಂತೆ ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ದಿಗ್ಗಜರಿಬ್ಬರಿಗೆ ವಿಶೇಷ ಬೀಳ್ಕೊಡುಗೆ ನೀಡಲು ಪ್ಲ್ಯಾನ್ ರೂಪಿಸಿರುವ ಮಾಹಿತಿ ಹೊರಬಿದ್ದಿದೆ. ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯ ವೇಳೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಚಿಂತಿಸಿದೆ ಸಿಇಒ ಟಾಡ್ ಗ್ರೀನ್‌ಬರ್ಗ್ ತಿಳಿಸಿದ್ದಾರೆ.